ದೇವಕಿಯ ಕರುಳ ಕುಡಿಯಾಗಿ ..
ಯಶೋಧೆಯ ಕಣ್ಣ ಬೆಳಕಾಗಿ ...
ತುಂಟ ಗೊಲ್ಲರಲಿ ...
ತಂಟೆ ಮಾಡುವ ಒಡನಾಡಿಯಾಗಿ..
ರುಕ್ಮಿಣಿ ಸಖನಾಗಿ ..
ದ್ರೌಪದಿ ಸಹೋದರನಾಗಿ ...
ಭಾಮೆಯ ಮುಂಗೋಪದ ನುಡಿಯಾಗಿ ..
ವಿರಹಿ ರಾಧೆಯ ಬಿಸಿಯುಸಿರ ಕಿಡಿಯಾಗಿ ..
ಕಳ್ಳ ಕೃಷ್ಣ ಕೊನೆಗೂ ...
ಯಾರಿಗೂ ದಕ್ಕಲಿಲ್ಲ ಇಡಿಯಾಗಿ ..